ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ಹಾಸ್ಯ ಕಲಾವಿದ ಶಂಕರ್ ರಾವ್ ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಗಿನ ಜಾವ 6:30ರ ಸುಮಾರಿಗೆ ತಮ್ಮ ಅರಕೆರೆಯ ನಿವಾಸದಲ್ಲಿ ನಿಧನರಾಗಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು.
ಶಂಕರ್ ರಾವ್ ಕಿರುತೆರೆಯ ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿ ಮೂಲಕ ಕರುನಾಡಿನ ಜನರನ್ನು ರಂಜಿಸಿದರು. ಶಂಕರ್ ರಾವ್ ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದು, ರಂಗಭೂಮಿಯಲ್ಲಿ ಗುರುತಿಸಿಕೊಂಡು ಬಳಿಕ ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಕಲಾವಿದನ ಆಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಶಂಕರ್ ರಾವ್ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ.










