ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ಅವರು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ನಿನ್ನೆ ರಾತ್ರಿ 9.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ.ಡಾ.ವಿಷ್ಣುವರ್ಧನ್ ಅವರ ಆಪ್ತರಾಗಿದ್ದ ಬಿ.ವಿಜಯ್ ಕುಮಾರ್ ಅವರು, ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್. ಮೌನಗೀತೆ, ಜಗದೇಕ ವೀರ ಸೇರಿ ಹಲವು ಚಿತ್ರಗಳನ್ನ ನಿರ್ಮಿಸಿದ್ದರು. ಸ್ವಚ್ಛ ಭಾರತ ಇವರ ನಿರ್ಮಾಣದ ಕೊನೆಯ ಚಿತ್ರವಾಗಿತ್ತು. ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸದ್ಯ ಬಿ.ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ಅವರ ನಿವಾಸದಲ್ಲಿ ಇಡಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕೆಲವರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.










