ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರು ಉಸಿರಾಟದ ಸಮಸ್ಯೆಯಿಂದಾಗಿ ಇಂದು ಬೆಳಗಿನ ಜಾವ 4.30 ಸುಮಾರಿಗೆ ನಿಧನರಾಗಿದ್ದಾರೆ.
ತಿಪಟೂರು ರಘು ಅವರು ವಿಷ್ಣುವರ್ಧನ್ ಮತ್ತು ಶಂಕರನಾಗ್ ಅಭಿನಯದ ‘ಬೆಂಕಿ ಬಿರುಗಾಳಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ನಾಗ ಕಾಳ ಭೈರವ, ಬೆಂಕಿ ಬಿರುಗಾಳಿ, ಬೆಟ್ಟದ ಹುಲಿ, ಕೆಂಪು ಹೋರಿ, ಸ್ವರ್ಣ ಮಹಲ್ ರಹಸ್ಯ, ವೀಣೆ ಸೇರಿದಂತೆ 16ಕ್ಕೂ ಹೆಚ್ಚು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ.










