ಕನ್ನಡ ಚಿತ್ರರಂಗದಿಂದ ನಟಿ ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಇದೀಗ ಈ ಬಗ್ಗೆ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ನನ್ನನು ಯಾರು ಬ್ಯಾನ್ ಮಾಡಿಲ್ಲ, ನನ್ನ ಬಳಿ ಅಧಿಕೃತವಾಗಿ ಈ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.
ಕಾಂತಾರ ಬಿಡುಗಡೆಯಾದ ಎರಡು ದಿನಕ್ಕೆ ಸಿನಿಮಾ ನೋಡಿದ್ರಾ? ಎಂದು ಕೇಳಿದ್ದರು. ನೋಡಿರಲಿಲ್ಲ. ಅದಕ್ಕೆ ಸರಿಯಾಗಿ ಸ್ಪಂದಿಸಿರಲಿಲ್ಲ. ಆ ನಂತರ ಸಿನಿಮಾ ನೋಡಿ ಚಿತ್ರತಂಡಕ್ಕೆ ಮೆಸೇಜ್ ಮಾಡಿದ್ದೆ. ಅವರು ಥ್ಯಾಂಕ್ಯೂ ಎಂದು ರಿಪ್ಲೇ ಮಾಡಿದ್ದರು ಎಂದು ರಶ್ಮಿಕಾ ಮಾತನಾಡಿದ್ದಾರೆ.
ನನ್ನ ವೈಯಕ್ತಿಕ ವಿಚಾರಗಳನ್ನು ಕ್ಯಾಮೆರಾ ಮುಂದೆ ಇಟ್ಟು ಪ್ರಪಂಚಕ್ಕೆ ತೋರಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ನನ್ನ ವೈಯಕ್ತಿಕ ವಿಚಾರಗಳು ಪ್ರಪಂಚಕ್ಕೆ ಬೇಕಾಗಿಲ್ಲ. ವೃತ್ತಿಪರವಾಗಿ ನನ್ನ ಸಿನಿಮಾಗಳ ಬಗ್ಗೆ ಮಾತನಾಡುವುದು ನನ್ನ ಜವಾಬ್ದಾರಿ. ಅದನ್ನಷ್ಟೇ ಮಾಡುತ್ತಿದ್ದೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದರು.










