ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ…

82
firstsuddi

ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂ.ಸಿ.ಶಿವಾನಂದಸ್ವಾಮಿ ಅವರ ಪರ ವಿವಿಧ ಸಂಘ ಸಂಸ್ಥೆಗಳು ಮತ್ತು ಸಂಘಟನೆಗಳ ಮುಖಂಡರು ನಗರದಲ್ಲಿ ನಿನ್ನೆ ಬಿರುಸಿನ ಪ್ರಚಾರ ನಡೆಸಿದರು.

ಬೆಳಗಿನಿಂದ ಸಂಜೆವರೆಗೆ ಎಂ.ಜಿ.ರಸ್ತೆ, ನಾಯ್ಡುರಸ್ತೆ, ಜಯನಗರ, ಆದರ್ಶನಗರ, ಗೃಹಮಂಡಳಿ ಬಡಾವಣೆ, ಹಿರೇಮಗಳೂರು ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿರುವ ಕಸಾಪ ಸದಸ್ಯರ ಮನೆ ಮನೆಗೆ ತೆರಳಿ ಶಿವಾನಂದಸ್ವಾಮಿ ಅವರ ಪರ ಮತ ಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಕುಂದೂರು ಅಶೋಕ್ ಸಂಘಟನೆ ಮಾಡುವುದರಲ್ಲಿ ಸಾಕಷ್ಟು ಅನುಭವವಿರುವ ಶಿವಾನಂದಸ್ವಾಮಿ ಅವರನ್ನು ಚುನಾವಣೆಯಲ್ಲಿ ಆಯ್ಕೆ ಮಾಡುವುದರಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಶಕ್ತಿ ಬರುತ್ತದೆ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು ನಾಡುನುಡಿಯ ಏಳಿಗೆಗಾಗಿ ಸಾಕಷ್ಟು ದುಡಿದಿರುವ ಶಿವಾನಂದಸ್ವಾಮಿ ಅವರನ್ನು ಚುನಾವಣೆಯಲ್ಲಿ ಮತದಾರರು ಗುರುತಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ರೈತ ಸಂಘದ ಮುಖಂಡ ಗುರುಶಾಂತಪ್ಪ ಮಾತನಾಡಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಶಿವಾನಂದ ಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ದಸಂಸ ಮುಖಂಡರಾದ ಜಿ.ಕೆ.ಬಸವರಾಜ್, ಪಿ.ವೇಲಾಯುಧನ್, ನವಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಸಿ.ಆರ್.ರಘು, ಡಾ|| ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಸ್ಥಾಪಕ ಅಧ್ಯಕ್ಷ ಬಿ.ಎಂ.ಕುಮಾರ್, ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ನಿಕಟಪೂರ್ವ ಜಿಲ್ಲಾ ಖಜಾಂಚಿ ಪ್ರೊ|| ಕೆ.ಎನ್.ಲಕ್ಷ್ಮೀಕಾಂತ್, ಸಿಪಿಐ ಮುಖಂಡ ಬಿ.ಅಮ್ಜದ್, ಮಲ್ಲೇದೇವರಹಳ್ಳಿ ಪ್ರಭು, ನಿಜಗುಣ, ವಿಲಿಯಂ ಪೆರೇರಾ, ಜಿ.ರಘು, ಎಂ.ಪರಮೇಶ್ವರಪ್ಪ, ನಟರಾಜ ಎಸ್.ಕೊಪ್ಪಲು, ಸಂತೋಷ್ ಹಾಜರಿದ್ದರು.