ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲು…

65
firstsuddi

ಬೆಂಗಳೂರು : ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ಬೇರೆಡೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.