ಕಬ್ಬು ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ, ಇಬ್ಬರು ಸ್ಥಳದಲ್ಲೇ ಸಾವು…

57
firstsuddi

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಜಿಲ್ಲೆಯ ಗುಂಡಾಲ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಂಗರಪುರ ಗ್ರಾಮದ ನಿವಾಸಿಗಳಾದ ಲಾರಿ ಚಾಲಕ ಹಾಗೂ ಮಾಲೀಕ ಪ್ರಕಾಶ್ ಮತ್ತು ಲಾರಿ ಕ್ಲೀನರ್ ಚಿನ್ನು ಮೃತರು.

ಗುಂಡಾಲ್ ಜಲಾಶಯ ಸಮೀಪದ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಕಬ್ಬು ತುಂಬಿಕೊಂಡು ತೆರಳುವಾಗ ದುರ್ಗಮ್ಮನ ದೇವಸ್ಥಾನ ಹತ್ತಿರ ರಸ್ತೆ ಬದಿಯಲ್ಲಿ ಹಾದುಹೋಗಿದ್ದ ಹೈ ಪವರ್ ವಿದ್ಯುತ್ ತಂತಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಚಿನ್ನು ಹಾಗೂ ಪ್ರಕಾಶ್ ಲಾರಿಯಿಂದ ಹೊರಗಿಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾದರೂ ಪ್ರಯತ್ನ ವಿಫಲವಾಗಿದೆ. ಹೈಪವರ್ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.