ಕಮಲ್ ಪಂತ್ ವರ್ಗಾವಣೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ…

63
firstsuddi

ಬೆಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ.

1991 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಕುಮಾರ್ ನಿಯುಕ್ತಿಗೊಂಡಿದ್ದಾರೆ. ಕೆಎಸ್ ಆರ್ ಪಿ ಎಡಿಜಿಪಿಯಾಗಿ ಆರ್.ಹಿತೇಂದ್ರ ಹಾಗೂ ಸಿಐಡಿ ಎಸ್ ಪಿಯಾಗಿ ಎಂ.ಎನ್.ಅನುಚೇತ್ ನೇಮಕಗೊಂಡಿದ್ದಾರೆ.