ಕರಾವಳಿಗೆ ಇನ್ನೆರಡು ದಿನಗಳಲ್ಲಿ ಮುಂಗಾರು ಆಗಮನ…

177
firstsuddi

ಫಸ್ಟ್ ಸುದ್ದಿ : ಇಂದು ಕೇರಳದ ಕರಾವಳಿಗೆ ಮುಂಗಾರು ಆಗಮಿಸಿದ್ದು, ಮುಂದಿನ 48 ಗಂಟೆ ಒಳಗೆ ಕರ್ನಾಟಕ ಕರಾವಳಿಗೆ ಮುಂಗಾರು ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 10ರಂದು ಕೇರಳದ ತಿರುವನಂತಪುರಂ, ಕೊಲ್ಲಂ, ಎರ್ನಾಕುಳಂ ಸೇರಿದಂತೆ ಕೆಲವು ಜಿಲ್ಲೆಗಳಿಗೆ 10ರಂದು ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದ್ದು, ಬಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲೂ ಜೂನ್ 12ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.