ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಭಾರತೀಯ ಸಿನಿಮಾ ರಂಗದ ಅತ್ಯುತ್ತಮ ಸಿನಿಮಾಟೋಗ್ರಾಫರ್ ಗಳಲ್ಲಿ ಅಶೋಕ್ ಕಶ್ಯಪ್ ಒಬ್ಬರಾಗಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಇಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಹಿರಿಯ ನಿರ್ದೇಶಕರು ಹಾಗೂ ಅಕಾಡೆಮಿಯ ಹಿಂದಿನ ಅಧ್ಯಕ್ಷರಾದ ಟ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಛಾಯಾಗ್ರಾಹಕ ಬಸವರಾಜ್ ಹಲವು ಗಣ್ಯರು ಈ ವೇಳೆ ಹಾಜರಿದ್ದು, ಅಶೋಕ್ ಅವರಿಗೆ ಶುಭ ಕೋರಿದರು.










