ಕರ್ನಾಟಕ ಬಜೆಟ್ 2023 : ರೈತರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ…

142
firstsuddi

ಬೆಂಗಳೂರು : ಈ ಬಾರಿ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಈ ಹಿಂದೆ 3 ಲಕ್ಷದವರೆಗಿದ್ದ ಶೂನ್ಯ ಬಡ್ಡಿದರದ ಮೊತ್ತವನ್ನು ರೂ. 5 ಲಕ್ಷಕ್ಕೆ ಏರಿಕೆ ಮಾಡಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ರೂ. ಕೋಟಿ ಸಾಲ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಸಿಎಂ ಬೊಮ್ಮಾಯಿ ರೈತರಿಗಾಗಿ ಭೂಸಿರಿ ಎಂಬ ನೂತನ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈ ಯೋಜನೆ ಅಡಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ, 10,000 ರೂ. ಹೆಚ್ಚಿನ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಇದು ರೈತರು ಕ್ರಿಮಿನಾಶಕ, ರಸಗೊಬ್ಬರ, ಬೀಜ ಖರೀದಿಗೆ ಅನುಕೂಲಕರವಾಗಲಿದೆ. ರಾಜ್ಯ ಸರ್ಕಾರದ 2,500 ರೂ ಮತ್ತು ನಬಾರ್ಡ್ ಯೋಜನೆ ಅಡಿ 2,500 ರೂ. ನೀಡಲಾಗುವುದು. ಇದು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

ಪಿಎಂ ಶ್ರೀ ಯೋಜನೆ ಅಡಿಯಲ್ಲಿ ರೈತರಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷದ ಅಂಗವಾಗಿ ರೈತರಿಗೆ ಸಿರಿ ಧಾನ್ಯ ಉತ್ಪಾದನೆ ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್‌ಗೂ ಪ್ರೋತ್ಸಾಹ ಧನ, ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ, ಅಡಿಕೆ ಬೆಳೆ ರೋಗ ನಿಯಂತ್ರಣಕ್ಕೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.