ಕರ್ನಾಟಕದಲ್ಲಿ ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ…

142
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ ಚಿತ್ರದುರ್ಗ-19, ದಾವಣಗೆರೆ-13, ಹಾಸನ-13, ದಾವಣಗೆರೆ-11, ಯಾದಗಿರಿ-9, ಬೀದರ್-9, ವಿಜಯಪುರ-5, ದಕ್ಷಿಣ ಕನ್ನಡ-3, ಉಡುಪಿ-3, ಕೋಲಾರ-2, ಬೆಂಗಳುರು-2, ಬಾಗಲಕೋಟೆ, ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.