ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 10 ಓಮಿಕ್ರಾನ್ ಪತ್ತೆ – ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ…

82
firstsuddi

ಬೆಂಗಳೂರು : ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 10 ಮಂದಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ ಆಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್, ನಿನ್ನೆ ಪತ್ತೆಯಾಗಿರುವ 10 ಮಂದಿ ಸೋಂಕಿತರ ಪೈಕಿ ಬೆಂಗಳೂರು ನಗರದಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದು, ಧಾರವಾಡದ ಇಬ್ಬರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಪತ್ತೆಯಾಗಿರುವ 8 ಮಂದಿ ಸೋಂಕಿತರ ಪೈಕಿ 5 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.