ಬೆಂಗಳೂರು : ಕರ್ನಾಟಕದಲ್ಲಿ ಲಾಕ್‍ಡೌನ್ ಮಾಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೀಡೀಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಾಕ್‍ಡೌನ್ ಮಾಡಬೇಕಾದ ಅಗತ್ಯವಿಲ್ಲ. ಈ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಕಾನ್ಫರೆನ್ಸ್‍ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಹಾಗೂ ರಾಜ್ಯದಲ್ಲಿ ಜನಜೀವನ ಮತ್ತಷ್ಟು ಸುಧಾರಣೆ ಆಗಲಿದೆ. ಆರ್ಥಿಕತೆ ಸುಧಾರಣೆಗಾಗಿ ಅವಕಾಶ ನೀಡಲು ಮೋದಿ ಅವರಲ್ಲಿ ಮನವಿ ಮಾಡುತ್ತೇನೆ ಎಂದರು.










