ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ…

67
firstsuddi

ಕಲಬುರಗಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ. ಗ್ರಾಮದಲ್ಲಿ ನಡೆದಿದೆ.

ಹನುಮವ್ವ (36) ಕೊಲೆಯಾದ ಮಹಿಳೆ. ಆಕೆಯ ಗಂಡ ಬಸವರಾಜ್ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮದುವೆ ಆದಾಗಿನಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳವಾಗುತ್ತಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಇಂದು ಬೆಳಗ್ಗೆ ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಕೊಲೆ ಮಾಡಿದ್ದಾನೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.