ಕಲಬುರಗಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು…

76
firstsuddi

ಕಲಬುರಗಿ : ಪಾರ್ಕ್ ನಲ್ಲಿ ಅಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಗಾರ್ಡನ್ ನಲ್ಲಿ ನಡೆದಿದೆ.

ಸಿದ್ದು(6) ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಕುರಿತು ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೆಸ್ಕಾಂ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಬಡಾವಣೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.