ಯಾದಗಿರಿ : ಅಧಿಕಾರಿಯೊಬ್ಬರು ತನ್ನ ಕಲಾವಿದ ತಂದೆಗೆ ಜೀವ ಎದರಿಕೆ ಹಾಕಿದ್ದಾರೆ ಎಂದು ಮನನೊಂದು ಮಗಳು ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಸಮೀಪದ ನಗರದಲ್ಲಿ ನಡೆದಿದೆ. ಭವಾನಿ(20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದ್ದು, ಕಲಾವಿದನಾಗಿರುವ ಭವಾನಿ ಅವರ ತಂದೆ ಶಂಕರಶಾಸ್ತ್ರಿ ಅವರು ಕನ್ನಡ ಮತ್ತು ಸಂಸ್ಕೃತ ಇಲಾಖೆ ಅಧಿಕಾರಿ ದತ್ತಪ್ಪ ಸಾಗನೂರ ಅವರ ಬಳಿ ಸರ್ಕಾರಿ ಕಾರ್ಯಕ್ರಮವೊಂದನ್ನು ನೀಡುವಂತೆ ಕೇಳಿದ್ದರು. ಸರ್ಕಾರಿ ಕಾರ್ಯಕ್ರಮವನ್ನು ಕೇಳಿದ್ದಕ್ಕೆ ಅಧಿಕಾರಿ ದತ್ತಪ್ಪ ಸೂಗನೂರ ಅವರು ಶಂಕರಶಾಸ್ತ್ರಿ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಶಂಕರಶಾಸ್ತ್ರಿ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾರೆ. ನಿನ್ನನ್ನು ಕೊಲೆ ಮಾಡಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಆದರೆ ಸಚಿವ ಸಿ.ಟಿ. ರವಿ ಅವರು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆಯೇ ಹೊರತು ಯಾವುದೇ ಕ್ರಮಕೈಗೊಂಡಿರಲಿಲ್ಲ. ಹೀಗಾಗಿ ಜೀವ ಬೆದರಿಕೆಯಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಭವಾನಿ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗರದಿಂದ ದೂರವಿರುವ ಭೀಮಾನದಿ ಬಳಿ ತೆರಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಭೇಟಿ ನೀಡಿ ಶೋಧಕಾರ್ಯ ನಡೆಸುತ್ತಿದ್ದಾರೆ.










