ಕಳಸ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು ಅಲ್ಲದೆ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವುದನ್ನು ಕಳಸ ಹೋಬಳಿ ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಹೋಬಳಿ ಅಧ್ಯಕ್ಷ ಗಿರೀಶ್ ಹೆಮ್ಮಕ್ಕಿ ತಿಳಿಸಿದ್ದಾರೆ.
ಕಳಸ ರಿಜ್ವಾನ್ ಎಂಬಾತ ಬಿಜೆಪಿ ಕಾರ್ಯಕರ್ತ ವಿಜಯ್ ಜೊತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ಬಗ್ಗೆ ಇಲ್ಲ ಸಲ್ಲದ ಅವಹೇಳನಕಾರಿ ಕಾಮೆಂಟ್ ಹಾಕಿ ಅದೇ ಮಾತಿಗೆ ಮಾತು ಬೆಳೆದು ನಂತರ ವಿಜಯ್ ಗೆ ಬಂದು ಹೊಡೆದಿದ್ದಾನೆ.ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣವನ್ನು ದಾಖಲು ಮಾಡಿದ್ದೇವೆ. ಆದರೆ ಇದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳದೆ ರಿಜ್ವಾನ್ ನನ್ನು ಠಾಣೆಯಲ್ಲಿಯೇ ಜಾಮೀನು ಮೇಲೆ ಬಿಡುಗಡೆಗೊಳಿಸಿದ್ದಾರೆ.
ಈತನು ಅವಹೇಳನಕಾರಿ ಮಾತುಗಳನ್ನು ಹೇಳಿ ಕಳಸದಂತ ಪುಟ್ಟ ಊರಿನಲ್ಲಿ ಕೋಮುವಾದಕ್ಕೆ ಪ್ರಚೋದನೆ ನೀಡುತ್ತಿದ್ದಾನೆ ಇದನ್ನು ನಾವು ಖಂಡಿಸುತ್ತಿದ್ದೇವೆ.ಇವನ ಬಗ್ಗೆ ನಿರ್ದಾಕ್ಷೀಣ್ಯ ಕ್ರಮ ತೆಗೆದುಕೊಳ್ಳದಿದ್ದರೆ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿಯ ಹೋಬಳಿ ಕಾರ್ಯದರ್ಶಿಗಳಾದ ರಂಗನಾಥ್,ಜಯಂತ್,ಕಾರ್ತಿಕ್ ಶಾಸ್ತ್ರೀ ಹಾಗೂ ಇತರ ಕಾರ್ಯಕರ್ತರು ಇದ್ದರು.










