ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,967 ಮಂದಿಯಲ್ಲಿ ಸೋಂಕು ದೃಢ…

116
firstsuddi

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,967 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದೆ. ಹಾಗೂ ನಿನ್ನೆ ಒಂದೇ ದಿನ 100 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ 2,649 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 81,970 ಮಂದಿ ಸೋಂಕಿತರ ಪೈಕಿ 27,919 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 51,401 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.