ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಎಂದ ಭೋಜೇಗೌಡ – ವೀಡಿಯೋ ವೈರಲ್…

82
firstsuddi

ಚಿಕ್ಕಮಗಳೂರು : ಹೆಚ್.ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಅವರು ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತನಾಡಿರುವ ವೀಡಿಯೋ ವೈರಲ್ ಆಗುತ್ತಿದ್ದು, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಮತ ಹಾಕಿ ಎನ್ನುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ.

ವೈರಲ್ ವೀಡಿಯೋದಲ್ಲಿ ಏನಿದೆ?: ಭೋಜೇಗೌಡ ಕಾರ್ಯಕರ್ತರ ಜೊತೆ ಮಾತನಾಡಿರುವ ವೀಡಿಯೋ ಇದಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನಿಗೆ ಮತ ಹಾಕುವಂತೆ ಜೆಡಿಎಸ್ ಮುಖಂಡ ತನ್ನ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ ಭೋಜೇಗೌಡ ಅವರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗುತ್ತಿದೆ. ಶಾಸಕ ಸಿ.ಟಿ. ರವಿಯನ್ನು ಸೋಲಿಸಲು ಕಾಂಗ್ರೆಸ್ – ಜೆಡಿಎಸ್ ಒಂದಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ.