ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆ…

65
firstsuddi

ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ಅವರು ಉಡುಪಿ ಮಠದ ಜಾಗದ ವಿಚಾರದಲ್ಲಿ ನೀಡಿದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಈ ಬೆನ್ನಲ್ಲೇ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಈ ವಿಚಾರಕ್ಕೆ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.

ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಟ್ವೀಟ್ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಮಿಥುನ್ ರೈ ನೀಡಿದ ಹೇಳಿಕೆ ಏನು?
ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮಕ್ಕೆ ಮಿಥುನ್ ರೈ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಿಥುನ್ ರೈ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.