ಕಾಂಗ್ರೆಸ್ ಸಂಸ್ಥಾಪನಾ ದಿನ : ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ…

91
firstsuddi

ನವದೆಹಲಿ : ಇಂದು ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದಿದೆ.

ಕೊನೆಗೆ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೋನಿಯಾ ಗಾಂಧಿ ಅವರು ಪಕ್ಷದ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಕ್ಷದ ಧ್ವಜವನ್ನು ಹಾರಿಸಲು ಧ್ವಜಸ್ತಂಭವನ್ನು ಏರಿದರು. ಸದ್ಯ ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಇದ್ದರು.