ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ.

50
firstsuddi

ಉಡುಪಿ: ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಕುಮಾರ್ ಶೆಟ್ಟಿ, ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದರು.