ಕಾಂಗ್ರೆಸ್​ಗೆ ಭರ್ಜರಿ ಜಯ – ಜೈಲಿನಲ್ಲಿದ್ದ ದಿನಗಳನ್ನು ನೆನೆದು ಭಾವುಕರಾದ ಡಿಕೆಶಿ.

51
firstsuddi

ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಾವು ಜೈಲಿನಲ್ಲಿದ್ದ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಡಿಕೆಶಿ, ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳವಾದ ಬಹುಮತ ನೀಡಿದ್ದಾರೆ ಎಂದು ಮತದಾರರಿಗೆ ಧನ್ಯವಾದ ತಿಳಿಸಿದರು.

ನಾನು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ಮಾಡಿ ಜೈಲಿಗಟ್ಟಿದ್ದರು. ನಾನು ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿ ನನ್ನನ್ನು ಜೈಲಿನಲ್ಲಿ ಭೇಟಿ ಮಾಡಲು ಬಂದಿದ್ದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಡಿಕೆಶಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಒಗ್ಗಟ್ಟಿನಲ್ಲಿ ಕೆಲಸ ಮಾಡಿದರೆ ಮಾತ್ರ ಪ್ರಗತಿ, ಅದರಿಂದಲೇ ಗೆಲುವು ಎಂದು ನಾನು ಮೊದಲಿನಿಂದಲೂ ಹೇಳಿದ್ದೇನೆ. ಇಂದಿನ ಸಾಧನೆ ಒಬ್ಬರ ಪ್ರಯತ್ನವಲ್ಲ. ನಾನು ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲಾ ನಾಯಕರನ್ನು, ಶಾಸಕರನ್ನು, ಬೂತ್ ಮಟ್ಟದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಡಿಕೆಶಿ ಹೇಳಿದರು.