ಕಾಂಗ್ರೆಸ್‍ನಿಂದ ಸಬ್ಕಾ ವಿಕಾಸ್ ನಿರೀಕ್ಷಿಸುವುದೇ ತಪ್ಪು: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ.

24

ನವದೆಹಲಿ: ಕುಟುಂಬವೇ ಮೊದಲು ಎನ್ನುವ ಕಾಂಗ್ರೆಸ್ ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ನಿರೀಕ್ಷಿಸುವುದೇ ತಪ್ಪು ಎಂದು ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ತನ್ನ ನೀತಿಗಳಲ್ಲಿ ಕುಟುಂಬವೇ ಮೊದಲು ಎಂಬುದಕ್ಕೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದರು. ಬಿಜೆಪಿಯ ಗಮನ ರಾಷ್ಟ್ರ ಮೊದಲು ಎಂದು ಹೇಳಿದ ಪ್ರಧಾನಿ ಮೋದಿ, ಭಾರತದ ಜನರು ಬಿಜೆಪಿಯ ಅಭಿವೃದ್ಧಿ ಮಾದರಿಗೆ ಬಲವಾದ ಬೆಂಬಲವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು, ವಂಚನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮಿಶ್ರಣವಿರುವ ರಾಜಕೀಯದ ಮಾದರಿಯನ್ನು ಸೃಷ್ಟಿಸಿದೆ. ಕಾಂಗ್ರೆಸ್‍ಗೆ ಕುಟುಂಬ ರಾಜಕಾರಣವೇ ಮುಖ್ಯ. ಅಂಥವರಿಂದ ಸಬ್ಕಾ ವಿಕಾಸ್ ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಟೀಕೆ ಮಾಡಿದರು.