ಕಾಂಗ್ರೆಸ್‍ಗೆ ರಾಜೀನಾಮೆ ಬಗ್ಗೆ ಸಿಎಂ ಇಬ್ರಾಹಿಂ ಅಧಿಕೃತ ಘೋಷಣೆ…

76
firstsuddi

ಬೆಂಗಳೂರು : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಸಿಎಂ ಇಬ್ರಾಹಿಂ ಅಧಿಕೃತವಾಗಿ ಘೋಷಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ. ಅವರು ಅದನ್ನು ಅಂಗೀಕಾರ ಮಾಡಬಹುದು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ರಾಜ್ಯದ ದೃಷ್ಟಿಯಿಂದ ಹಾಗೂ ಸ್ವಾಭಿಮಾನದ ಕಾರಣಕ್ಕಾಗಿ ಎಂಎಲ್ಸಿ ಸ್ಥಾನ ತ್ಯಜಿಸುವ ಹಾಗೂ ಕಾಂಗ್ರೆಸ್ ತೊರೆಯುವ ತೀರ್ಮಾನಕ್ಕೆ ಬಂದಿದ್ದೇನೆ ಎಂದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಜೊತೆ ಚರ್ಚೆ ಮಾಡಿ ಮುಂದಿನ ನಡೆಯನ್ನು ಪ್ರಕಟಿಸುತ್ತೇನೆ ಎಂದರು.

ಕಾಂಗ್ರೆಸ್ ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಆದ ರಾಜಕೀಯ ಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯಲ್ಲೂ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.