ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ ಪ್ರಕರಣ – ಮೂಡಿಗೆರೆ ಪಟ್ಟಣದಲ್ಲಿ ಪೊಲೀಸರಿಂದ ಲಾಠಿಚಾರ್ಜ್.

78
firstsuddi

ಮೂಡಿಗೆರೆ : ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಜನರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಇಂದು ಮೃತದೇಹವನ್ನ ಅರಣ್ಯ ಇಲಾಖೆ ಬಾಗಿಲಲ್ಲಿ ಇಟ್ಟು ಈ ಸಾವಿಗೆ ಅಧಿಕಾರಿಗಳೇ ಕಾರಣ. ಇದು ಅಧಿಕಾರಿಗಳು ಮಾಡಿದ ಕೊಲೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರ ಮೇಲೆ ಮನಸ್ಸೋ ಇಚ್ಛೆ ಲಾಠಿ ಬೀಸಿದ್ದಾರೆ.