ಬಾಗಲಕೋಟೆ: ಕಾಣೆಯಾಗಿದ್ದ ವಕೀಲರೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ಪತ್ತೆಯಾಗಿದೆ.
ಗಿರೀಶ್ ಕಾಡಣ್ಣವರ (38) ಕೊಲೆಯಾದ ವಕೀಲ. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು. ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಇವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತರು ಇವರ ತಲೆ ಮತ್ತು ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಕೊಲೆ ಮಾಡಿದ್ದು ಯಾರು? ಕೊಲೆ ಹಿಂದಿನ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










