ಕಾನೂನು ತಜ್ಞರೊಂದಿಗೆ ಅಂತಾರಾಜ್ಯ ಜಲ ವಿವಾದ ಕುರಿತು ಸಿಎಂ ಬೊಮ್ಮಾಯಿ ಸಭೆ…

73
firstsuddi

ನವದೆಹಲಿ : ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು.

ದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಉಪಸ್ಥಿತರಿದ್ದರು.

ಮೇಕೆದಾಟು, ಮಹದಾಯಿ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವಿನ ಬಗ್ಗೆ ಚರ್ಚೆ ನಡೆಸಲಾಯಿತು. ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಸಮಾಲೋಚನೆ ಮಾಡಲಾಗಿದೆ.