ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಮೂವರು ಅಸ್ವಸ್ಥ…

90
firstsuddi

ಹುಬ್ಬಳ್ಳಿ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನವನಗರದ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಉಪವಾಸ ನಿರತ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಮೂರು ದಿನದಿಂದ ಉಪವಾಸ ಸತ್ಯಾಗ್ರಹ ಹೋರಾಟ ಮಾಡುತ್ತಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಲು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಈ ನಿಟ್ಟಿನಲ್ಲಿ ಉಪವಾಸ ಧರಣಿ ಕುಳಿತ ವಿದ್ಯಾರ್ಥಿಗಳಲ್ಲಿ ಮೂವರು ಅಸ್ವಸ್ಥಗೊಂಡಿದ್ದಾರೆ. ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.