ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪತ್ತೆಗಾಗಿ ಕೇಂದ್ರದ ನೆರವು ಕೋರಿದ ಸಂಸದರು…

988
firstsuddi

ಬೆಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ನೆರವು ಕೋರಿ ಅಮಿತ್ ಶಾ ಅವರಿಗೆ ಮನವಿ ಮಾಡಿಕೊಂಡಿದ್ದು, ಸಿದ್ದಾರ್ಥ್ ಅವರು ನಿನ್ನೆ ರಾತ್ರಿ 7:30ರಿಂದ ಉಳ್ಳಾಲ ಸಮೀಪದ ನೇತ್ರಾವತಿ ನದಿ ಸೇತುವೆ ಬಳಿ ನಾಪತ್ತೆಯಾಗಿದ್ದು, ಈ ಕುರಿತು ಸಂಸದರಾದ ಶೋಭ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಗದ್ದಿಗೌಡರ್ ಹಾಗೂ ಭಗವಂತ್ ಖೂಬಾ ಅವರು ಸಿದ್ದಾರ್ಥ್ ಅವರ ಪತ್ತೆಗಾಗಿ ನೆರವು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.