ಕಾಬೂಲ್ ಮಿಲಿಟರಿ ಆಸ್ಪತ್ರೆ ಬಳಿ ಭೀಕರ ಸ್ಫೋಟ – 15 ಮಂದಿ ದುರ್ಮರಣ…

140
firstsuddi

ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮಿಲಿಟರಿ ಆಸ್ಪತ್ರೆ ಬಳಿ ಎರಡು ಭೀಕರ ಸ್ಫೋಟ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿದ್ದರೆ, 34 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಕುರಿತು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಟ್ವೀಟ್ ಮಾಡಿದ್ದು, 400 ಹಾಸಿಗೆಗಳಿರುವ ಸರ್ದಾರ್ ಮೊಹಮ್ಮದ್ ದಾವುದ್ ಖಾನ್ ಆಸ್ಪತ್ರೆ ಬಳಿ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದಿದ್ದಾರೆ.

ಸುಮಾರು ಹತ್ತು ನಿಮಿಷಗಳ ನಂತರ ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ತಾಲಿಬಾನ್ ತಮ್ಮ ಆಡಳಿತವನ್ನು ಮರುಸ್ಥಾಪಿಸಲು ಭದ್ರತಾ ಪಡೆಗಳನ್ನು ದುರ್ಬಲಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.