ಬರ್ಮಿಂಗ್‌ಹ್ಯಾಮ್ : ಕಾಮನ್ವೆಲ್ತ್ ಗೇಮ್ಸ್ನ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ನೇರ ಸೆಟ್ ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು.
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಇಲ್ಲಿಯವರೆಗೆ 19 ಚಿನ್ನ, 15 ಬೆಳ್ಳಿ, 22 ಕಂಚಿನೊಂದಿಗೆ ಒಟ್ಟು 56 ಪದಕ ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.










