ಕಾಮನ್​ವೆಲ್ತ್​ ಗೇಮ್ಸ್​ನಿಂದ ಹೊರಗುಳಿದ ನೀರಜ್ ಚೋಪ್ರಾ.. ಕಾರಣ

107
firstsuddi

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಗಾಯದ ಸಮಸ್ಯೆಯಿಂದಾಗಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಗೇಮ್ಸ್ ನಿಂದ ಈ ಬಾರಿ ಹೊರಗುಳಿದಿದ್ದಾರೆ.

ಈ ಬಗ್ಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಮಾಹಿತಿ ನೀಡಿದ್ದು, ಹಾಲಿ ಒಲಿಂಪಿಕ್ ಚಾಂಪಿಯನ್ ಗಾಯಗೊಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ತಿಂಗಳ ಕಾಲ ವಿಶ್ರಾಂತಿ ಬೇಕಾಗಿದೆ. ಇದರಿಂದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ಕಾಮನ್ ವೆಲ್ತ್ ಗೇಮ್ಸ್-2022 ಜುಲೈ 28 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ.

ಜುಲೈ 24 ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ 88.13 ಮೀ ಭರ್ಜಿ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಗೆದ್ದಿದ್ದರು.