ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವು…

138
firstsuddi

ಚಿಕ್ಕಮಗಳೂರು : ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಕೊಪ್ಪದ ಗುಣವಂತೆ ಮೆಡಿಕಲ್ ಮಾಲೀಕರಾದ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ಬರುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ಬರುವ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ನಡೆದಿದೆ.

ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.