ಕಾರು, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ; ಸ್ಥಳದಲ್ಲೇ ಇಬ್ಬರು ಸಾವು…

87
firstsuddi

ತುಮಕೂರು : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಇಂದು ಬೆಳಂ ಬೆಳಗ್ಗೆ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಗಿರೀಶ್(37) ಹಾಗೂ ಮಾನ್ಯ(17) ಮೃತ ದುರ್ದೈವಿಗಳು. ಇನ್ನು ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಕೆಎಸ್‌ಆರ್‌ಟಿಸಿ ಬಸ್ ನಲ್ಲಿದ್ದ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.