ಸೂರ್ಯಪೇಟ್ (ತೆಲಂಗಾಣ): ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು 10 ಮಂದಿ ಇದ್ದರು. ಕಾರು ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ದುರಸ್ತಿಗಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಅತಿವೇಗದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಎಲ್ಲಾ ಆರು ಪ್ರಯಾಣಿಕರು (ನಾಲ್ಕು ಪುರುಷರು, ಒಬ್ಬ ಮಹಿಳೆ ಮತ್ತು ಹೆಣ್ಣು ಮಗು) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.










