ಕಾರು ಪಲ್ಟಿ – ಅಂತ್ಯಕ್ರಿಯೆಗೆ ಹೊರಟಿದ್ದ ದಂಪತಿ ಸಾವು…

90
firstsuddi

ಕಾರವಾರ : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ, ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೊರಟಿದ್ದ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಮುಂಡಗೋಡದ ಅಮ್ಮಾಜಿ ಕೆರೆಯಲ್ಲಿ ನಡೆದಿದೆ.

ಮುಂಡಗೋಡ ತಾಲೂಕಿನ ಅರಶಿಣಗೇರಿಯ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳಾಗಿದ್ದಾರೆ. ಸಂಬಂಧಿಯೊಬ್ಬರ ಅಂತ್ಯಕ್ರಿಯೆಗೆ ತೆರಳುವಾಗ ಅವರ ಕಾರು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಕಾರು ಉಲ್ಟಾ ಆಗಿ ಬಿದ್ದ ಕಾರಣ ಕಾರಿನ ಬಾಗಿಲು ತೆಗೆಯಲಾಗದೇ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿ ಶಾಮಕದಳದವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ನಗ್ಗೆ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.