ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು…

71
firstsuddi

ವಿಜಯಪುರ : ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಂಗೂರ ಕ್ರಾಸ್ ಬಳಿ ನಿನ್ನೆ ಸಂಜೆ ಸಂಭವಿಸಿದೆ.

ದೇವರ ಹಿಪ್ಪರಗಿಯ ಸಲೀಂ ಉರ್ಫ್ ಸಲ್ಮಾನ್ ಬಂದೇನವಾಜ್ ಟಕ್ಕಳಕಿ (20) ಹಾಗೂ ಸೈಪನ್ ತಾಂಬೋಳೆ(17) ಅಪಘಾತದಲ್ಲಿ ಮೃತಪಟ್ಟವರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರು ಹುನಗುಂದ ಕಡೆಯಿಂದ ಮುದ್ದೇಬಿಹಾಳ ಮಾರ್ಗವಾಗಿ ದೇವರ ಹಿಪ್ಪರಗಿ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.