ಹಾವೇರಿ: ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಬಿ.ಮನೋಹರ(38), ಪ್ರಿಯಾಂಕಾ(23) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೊನಾಲಿಸಾ ಎಂಬ ಹೆಸರಿನ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನಿಂದ ಮುಂಬೈ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










