ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು, ಮತ್ತಿಬ್ಬರಿಗೆ ಗಂಬೀರ ಗಾಯ…

74
firstsuddi

ಹಾಸನ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ನಿಲುವಾಗಿಲು ಬಳಿ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಲಾಳನಪುರದ ಶಂಕರ್ ಹಾಗು ಅರಕಲಗೂಡಿನ ಮಗು ಮೃತಪಟ್ಟವರು. ಗೌರಿ ಹಬ್ಬಕ್ಕೆಂದು ಅಕ್ಕನ ಕರೆದೊಯ್ಯಲು ಬಂದಿದ್ದ ಬಿಎಸ್ ಎಫ್ ಯೋಧ ಅಕ್ಕ-ಭಾವ ಹಾಗೂ ಮಗು ಜೊತೆ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಧು ಮತ್ತು ಪತ್ನಿ ಚೈತ್ರಾಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.