ಕಾರ್ಕಳ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು…

203
firstsuddi

ಕಾರ್ಕಳ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಜೆಕಾರು ಸಮೀಪದ ಮುಂಡ್ಲಿ ಜಲಪಾತದಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರು ಪಡ್ಡನಡ್ಕ ನಿವಾಸಿ ಕಿರಣ್(21) ಎಂದು ಗುರುತಿಸಲಾಗಿದೆ. ಮೃತ ಯುವಕ ತನ್ನ ನಾಲ್ವರು ಸ್ನೇಹಿತರೊಂದಿಗೆ ಅರ್ಬಿ ಫಾಲ್ಸ್ ವೀಕ್ಷಣೆಗೆ ತೆರಳಿದ್ದು, ಬಳಿಕ ನೀರಿನಲ್ಲಿ ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.