ಕಾರ್ಯಕರ್ತರನ್ನು ಮಾಧ್ಯಮ ಚರ್ಚೆಗಳಿಗೆ ಕಳುಹಿಸದಿರಲು ಕಾಂಗ್ರೆಸ್ ನಿರ್ಧಾರ…

189
firstsuddi

ನವದೆಹಲಿ : ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಅವರು ಕಾಂಗ್ರೆಸ್ ಕಾರ್ಯಕರ್ತರು ಒಂದು ತಿಂಗಳ ಕಾಲ ಮಾಧ್ಯಮಗಳ ಸಂದರ್ಶನದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ಸೂಚನೆ ನೀಡಿದೆ ಎಂದು ತಮ್ಮ ಟ್ವಿಟರ್‍ನಲ್ಲಿ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದ್ದ ಹಿನ್ನೆಲೆ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಸಭೆ ನಡೆಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಒಂದು ತಿಂಗಳ ಕಾಲ ಮಾಧ್ಯಮ ಚರ್ಚೆಗಳಿಗೆ ಭಾಗಿಯಾಗಬಾರದು ಹಾಗೂ ಯಾವುದೇ ಮಾಹಿತಿಯನ್ನು ತಿಳಿಸಬಾರದು ಎಂದು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಧ್ಯಮ ಚರ್ಚೆಗೆ ಆಹ್ವಾನಿಸಬೇಡಿ ಎಂದು ಎಲ್ಲಾ ಮಾಧ್ಯಮ ಚಾನಲ್‍ಗಳು ಹಾಗೂ ಸಂಪಾದಕರಿಗೆ ಮನವಿ ಮಾಡಿಕೊಂಡಿದ್ದಾರೆ.