ವಿಜಯಪುರ: ಕಾಲುವೆಗೆ ಜಾರಿ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ನಡೆದಿದೆ.
ಕಲ್ಲಯ್ಯ ಹಿರೇಮಠ (13) ಮೃತ ಬಾಲಕ. ನಿನ್ನೆ ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ ಜಮೀನಿನಲ್ಲಿದ್ದ ತನ್ನ ತಂದೆ ಗಂಗಯ್ಯನನ್ನು ಭೇಟಿಯಾಗಲು ತೆರಳಿದ್ದ. ಈ ವೇಳೆ ಕಾಲು ಜಾರಿ ತುಂಬಿ ಹರಿಯುತ್ತಿದ್ದ ಕಾಲುವೆಗೆ ಬಿದ್ದು ಬಾಲಕ ಸಾವಿಗೀಡಾಗಿದ್ದಾನೆ.
ಕತ್ತಲಾದರೂ ಮನೆಗೆ ವಾಪಸ್ ಮರಳದ ಬಾಲಕನಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗ್ಗೆ ಜಮೀನಿನ ಬಳಿ ಹಾದು ಹೋಗಿರುವ ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










