ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಬಸ್ ಮೇಲೆ ಕಲ್ಲು ತೂರಾಟ – ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ…

67
firstsuddi

ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ವಿವಾದ ಹಿಂಸಾತ್ಮಕ ರೂಪ ಪಡೆದುಕೊಳ್ಳುತ್ತಿದೆ. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಿಸಿದ್ದಾರೆ. ಇನ್ನೊಂದೆಡೆ ಶಿಕಾರಿಪುರದಲ್ಲಿ ಚಲಿಸುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ರಸ್ತೆಯ ಪದವಿ ಪೂರ್ವ ಕಾಲೇಜಿನ ಮುಂಭಾಗ ಘಟನೆ ನಡೆದಿದೆ.

ಹಿಜಾಬ್ – ಕೇಸರಿ ಶಾಲು ವಿವಾದ ಸಂಬಂಧ ಕಾಲೇಜಿನ ಬಳಿ ಪ್ರತಿಭಟನೆ ನಡೆಯುವಾಗ ಉದ್ರಿಕ್ತ ಅನ್ಯ ಕೋಮಿನ ಯುವಕರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ನ ಗಾಜು ಸಂಪೂರ್ಣ ಪುಡಿ ಪುಡಿಯಾಗಿದೆ. ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿ ನೀಡಿ ಗುಂಪು ಚದುರಿಸಿದ್ದು, ಬಿಗುವಿನ ವಾತಾರಣ ನಿರ್ಮಾಣವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದು, ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದೆ.