ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ವಂಚನೆ.

27

ಬೆಂಗಳೂರು: ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಗ್ರಾಹಕರಿಗೆ ಕರೆ ಮಾಡುತ್ತಿದ್ದ ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ನಿನ್ನೆ ದಾಳಿ ನಡೆಸಿ, 2 ಜನರನ್ನು ಬಂಧಿಸಿದ್ದಾರೆ. ಇದೇ ವೇಳೆ 15 ಮಂದಿಯರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷದ ಹಿಂದೆ ತೆರೆಯಲಾಗಿದ್ದ ಕಾಲ್ ಸೆಂಟರ್ ಅಧಿಕೃತವಾಗಿ ನೋಂದಣಿಯಾಗಿರುವುದಿಲ್ಲ. 7 ಜನ ಯುವತಿಯರು ಹಾಗೂ 8 ಮಂದಿ ಯುವಕರು ಇಲ್ಲಿ ಕೆಲಸ ಮಾಡುತ್ತಿದ್ದು, ಗ್ರಾಹಕರಿಗೆ ಕರೆ ಮಾಡಿ ಷೇರು ಪೇಟೆಯಲ್ಲಿ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. 15 ನೌಕರರ ವಿಚಾರಣೆ ನಡೆಯುತ್ತಿದೆ. ಈವರೆಗೆ ಎಷ್ಟು ಗ್ರಾಹಕರಿಗೆ ಕರೆ ಮಾಡಲಾಗಿದೆ ಹಾಗೂ ಯಾವ ಕಂಪನಿಗಳ ಷೇರುಗಳ ಮೇಲೆ ಹೂಡಿಕೆ ಮಾಡುವಂತೆ ಗ್ರಾಹಕರಿಗೆ ಕರೆ ಮಾಡಿ ಒತ್ತಡ ಹೇರುತ್ತಿದ್ದರು ಎಂಬ ವರದಿಯನ್ನ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ವರದಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿ, ಮಾಲೀಕ ಜಿತೇಂದ್ರ ಕುಮಾರ್ ಮತ್ತು ಪಾಲುದಾರ ಚಂದನ್ ಕುಮಾರ್ ಅವರನ್ನು ಬಂಧಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.