ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23ರಂದು ಮಂಡ್ಯ ಬಂದ್‌ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಸೇರಿದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ಮೂಲಕ ಪ್ರತಿಭಟನೆ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡಿದೆ. ಬಂದ್ ಸಂಬಂಧ ನಾಳೆ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಜ್ಯದಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರದಲ್ಲೂ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.










