ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ : ಮಂಗಳೂರಿನ ಇಂಜಿನಿಯರಿಂಗ್ ಕಾಲೇಜ್ ಮೇಲೆ ಎನ್‍ಐಎ ದಾಳಿ…

37
firstsuddi

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರಕುಗೊಳಿಸಿರುವ ಎನ್ಎಐ ಇಂದು ಮಂಗಳೂರು ಹೊರವಲಯದ ಕೊಣಾಜೆ ಬಳಿಯಿರುವ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದಿರುವ 7 ಮಂದಿ ಎನ್ಐಎ ಅಧಿಕಾರಿಗಳ ತಂಡ ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ದಾಳಿಯ ಬಳಿಕ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ಈ ವೇಳೆ ವಶಕ್ಕೆ ಪಡೆದ ವಿದ್ಯಾರ್ಥಿಯನ್ನು ಉಡುಪಿ ಮೂಲದ ರಿಹಾನ್ ಶೇಖ್ ಎಂದು ಗುರುತಿಸಲಾಗಿದೆ.

ಈ ಕಾಲೇಜಿನಲ್ಲಿ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ನ ಆರೋಪಿ ಮಾಝ್ ಮುನೀರ್ ಶಿಕ್ಷಣ ಪಡೆದಿದ್ದು, ಈ ವೇಳೆ ಕಾಲೇಜಿನಲ್ಲಿ ಉಗ್ರ ಚಟುವಟಿಕೆಯ ಪ್ಲಾನ್ ನಡೆಸಿರುವ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮಾಝ್ ಮುನೀರ್ ಜೊತೆ ಕುಕ್ಕರ್ ಬ್ಲಾಸ್ಟ್ ರೂವಾರಿ ಶಾರೀಕ್ ಇದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ನಂಟು ಸಾಧ್ಯತೆ ಇದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.