ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ಪುತ್ರಿಯ ವಿವಾಹ ನೆರವೇರಿಸಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ…

365
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಲಾಕ್‍ಡೌನ್ ನಿಂದಾಗಿ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರು ಈಗಾ ತಮ್ಮ ಪುತ್ರಿಯ ವಿವಾಹವನ್ನು ಸರಳವಾಗಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗಿನ ಶುಭ ಮುಹೂರ್ತದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಅವರ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಸೇರಿದಂತೆ ಹಲವು ಗಣ್ಯರು ಆಗಮಿಸಿ ನೂತನ ವಧು ವರರಿಗೆ ಆಶೀರ್ವದಿಸಿದರು.