ಕುಡಿದ ಅಮಲಿನಲ್ಲಿ ಮಗಳ ಮೇಲೆಯೇ ತಂದೆಯಿಂದ ಅತ್ಯಾಚಾರ!

102
firstsuddi

ಲಕ್ನೋ : ಕುಡಿದ ಅಮಲಿನಲ್ಲಿ ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ತಂದೆ ತನ್ನ ಪಕ್ಕದಲ್ಲೇ ಮಲಗಿದ್ದ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸಹೋದರನಿಗೆ ವಿಷಯ ಗೊತ್ತಾಗಿದೆ. ನಂತರ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಾಂಗಾದ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಗಯಾದತ್ ಮಿಶ್ರಾ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಕೆಲ ವರ್ಷಗಳ ಹಿಂದೆ ಬಾಲಕಿಯ ತಾಯಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.